ನವದೆಹಲಿ: ನಿಮ್ಮ ಬಳಿ ಆಧಾರ್ ಅಥವಾ ಪ್ಯಾನ್ ಕಾರ್ಡ್ ಇದ್ದರೂ ಇನ್ನೂ ಲಿಂಕ್ ಮಾಡಿಲ್ಲ ಎಂದಾದಲ್ಲಿ ಮುಖ್ಯವಾದ ಮಾಹಿತಿ ಇಲ್ಲಿದೆ.
ಸರ್ಕಾರ 1,000 ರೂ ದಂಡವನ್ನು ವಿಧಿಸುವುದನ್ನು ತಪ್ಪಿಸಲು, ನೀವು ಜೂನ್ 30 ರೊಳಗೆ ನಿಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಬೇಕು. ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಪ್ಯಾನ್-ಆಧಾರ್ ಅನ್ನು ಲಿಂಕ್ ಮಾಡಲು ಮಾರ್ಚ್ 31, 2023 ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಜೋಡಣೆ ಮಾಡಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.
ಜೂನ್ 30, 2022 ರೊಳಗೆ 500 ರೂ. ದಂಡ ಪಾವತಿಸಬೇಕು. ನಂತರವೂ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡದಿದ್ದರೆ 1,000 ರೂ. ದಂಡ ಕಟ್ಟಬೇಕಾಗುತ್ತದೆ.
ಜುಲೈ 1 ರಿಂದ ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಆದಾಯ ತೆರಿಗೆ ಏಜೆನ್ಸಿಯು ನಿಮಗೆ 1,000 ರೂ. ಶುಲ್ಕ ವಿಧಿಸುತ್ತದೆ. ನೀವು ಮಾರ್ಚ್ 31, 2023 ರೊಳಗೆ ನಿಮ್ಮ ಆಧಾರ್ ಪ್ಯಾನ್ ಅನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ.
www.incometax.gov.in ನಲ್ಲಿ ಅಧಿಕೃತ ಆದಾಯ ತೆರಿಗೆ ಇ-ಫೈಲಿಂಗ್ ವೆಬ್ ಸೈಟ್ ಗೆ ಭೇಟಿ ನೀಡಿ. ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡಬಹುದಾಗಿದೆ.