ಬೆಂಗಳೂರು: ಹೆಚ್.ಸಿ.ಎಲ್. ಟೆಕ್ನಾಲಜೀಸ್ ಈ ವರ್ಷ 15 ಸಾವಿರ ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ.
ಕ್ಯಾಂಪಸ್ ಸಂದರ್ಶನದ ಮೂಲಕ ನೇಮಕಾತಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಹೆಚ್.ಸಿ.ಎಲ್. ಟೆಕ್ನಾಲಜೀಸ್ 9000 ಜನರನ್ನು ನೇಮಕ ಮಾಡಿಕೊಂಡಿತ್ತು. ಈ ವರ್ಷ 15 ಸಾವಿರ ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹೊಸ ಉದ್ಯೋಗಿಗಳಿಗೆ 3.5 ಲಕ್ಷ ರೂಪಾಯಿ ವಾರ್ಷಿಕ ಪ್ಯಾಕೇಜ್ ನೀಡಲಾಗುವುದು ಎನ್ನಲಾಗಿದೆ.