alex Certify HDFC ಇಂಟರ್ನೆಟ್‌ ಬ್ಯಾಂಕಿಂಗ್‌ ಬಳಕೆದಾರರಿಗೆ ಇಲ್ಲಿದೆ ಒಂದು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HDFC ಇಂಟರ್ನೆಟ್‌ ಬ್ಯಾಂಕಿಂಗ್‌ ಬಳಕೆದಾರರಿಗೆ ಇಲ್ಲಿದೆ ಒಂದು ಮಾಹಿತಿ

ಮಂಗಳವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಕೆಲ ಗ್ರಾಹಕರು ತೊಂದರೆ ಅನುಭವಿಸಿದ್ದಾರೆ. ಕೆಲವರು ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಬಳಸಲು ಸಾಧ್ಯವಾಗ್ತಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ ಸೇವೆ ನಿಧಾನವಾಗಿದೆ. ಪ್ರಸ್ತುತ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಲಾಗ್ತಿದೆ ಎಂದು ಎಚ್.ಡಿ.ಎಫ್.ಸಿ. ಬ್ಯಾಂಕ್ ಹೇಳಿದೆ.

ಗ್ರಾಹಕರು ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ಪ್ರವೇಶಿಸುವ ವೇಳೆ ಸಮಸ್ಯೆ ಎದುರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದೆ. ಮೊಬೈಲ್ ಬ್ಯಾಂಕಿಂಗ್ ಸೇವೆ ತುಂಬಾ ನಿಧಾನವಾಗಿದೆ.

ಗ್ರಾಹಕರ ಸಮಸ್ಯೆಗೆ ಬ್ಯಾಂಕ್ ಸ್ಪಂದಿಸಿದೆ. ಈ ಬಗ್ಗೆ ಎಚ್.ಡಿ.ಎಫ್.ಸಿ. ಟ್ವಿಟ್ ಮಾಡಿದೆ. ಕೆಲವು ಗ್ರಾಹಕರು ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಪ್ರವೇಶಿಸುವ ವೇಳೆ ಸಮಸ್ಯೆ ಎದುರಿಸಿದ್ದಾರೆ. ಇದನ್ನು ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಅನಾನುಕೂಲತೆಗಾಗಿ ನಾವು ಕ್ಷಮೆ ಯಾಚಿಸುತ್ತೇವೆ. ನಂತರ ಮತ್ತೆ ಪ್ರಯತ್ನಿಸಲು ಗ್ರಾಹಕರಿಗೆ ವಿನಂತಿಸುತ್ತೇವೆ  ಧನ್ಯವಾದಗಳು ಎಂದು ಟಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...