ನವದೆಹಲಿ: ಜೂನ್ 1 ರಿಂದ ದೇಶಾದ್ಯಂತ ಭಾರತೀಯ ಗುಣಮಟ್ಟ ಮಾನಕ ಸಂಸ್ಥೆ(ಬಿಐಎಸ್) ಹೆಲ್ಮೆಟ್ ಗಳನ್ನು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬಳಸಬೇಕಿದೆ.
ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈ ಕುರಿತು ಸೂಚನೆ ನೀಡಿದ್ದು, ಬಿಐಎಸ್ ಪ್ರಮಾಣಿತ ಹೆಲ್ಮೆಟ್ ಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಹೇಳಲಾಗಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ ಗಳ ಮಾರಾಟದ ಮೇಲೆ ಇದರಿಂದ ನಿಯಂತ್ರಣ ಹೇರಬಹುದು ಎಂದು ಸರ್ಕಾರ ತಿಳಿಸಿದೆ.
ಸುಪ್ರೀಂಕೋರ್ಟ್ ನೇಮಿಸಿದ್ದ ರಸ್ತೆ ಸುರಕ್ಷತೆ ಉನ್ನತಮಟ್ಟದ ಸಮಿತಿಯ ಶಿಫಾರಸಿನ ಅನ್ವಯ ಹೆಲ್ಮೆಟ್ ಧರಿಸಲು ಕಠಿಣ ನಿಯಮಗಳ ಜನರಿಗೆ ನೀಡಿದ ಸಲಹೆಯನ್ನು ಪರಿಗಣಿಸಲಾಗಿದೆ. ಜನರಿಗೆ ಹವಾಮಾನಕ್ಕೆ ಅನುಗುಣವಾಗಿ ಸೂಕ್ತ ರಕ್ಷಣಾ ವ್ಯವಸ್ಥೆ ಹೊಂದಿರುವ ಹಗುರವಾದ ಹೆಲ್ಮೆಟ್ ಬಳಕೆಗೆ ಅವಕಾಶ ಕಲ್ಪಿಸಬೇಕೆಂದು ತಿಳಿಸಲಾಗಿದ್ದು, ಅಂತೆಯೇ ಈ ಕ್ರಮ ಕೈಗೊಳ್ಳಲಾಗಿದೆ.
ಭಾರತೀಯ ಮಾನಕ ಸಂಸ್ಥೆ(BIS) ದೃಢೀಕರಿಸಿದ ಹೆಲ್ಮೆಟ್ ಗಳನ್ನು ಮಾತ್ರ ಉತ್ಪಾದನೆ ಮತ್ತು ಮಾರಾಟ ಮಾಡಬೇಕು ಎಂದು ಹೇಳಲಾಗಿದೆ. ಕಳಪೆ ಹೆಲ್ಮೆಟ್ ಗಳ ಉತ್ಪಾದನೆ ಮತ್ತು ಮಾರಾಟ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಹೆಲ್ಮೆಟ್ ಧರಿಸದ ಸಂದರ್ಭದಲ್ಲಿ ಅಪಘಾತದಲ್ಲಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಿಐಎಸ್ ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಜೂನ್ 1 ರಿಂದ ನಿಯಮ ಜಾರಿಗೆ ಬರಲಿದೆ.