ಬೆಂಗಳೂರು : ಹೈಕಮಾಂಡ್ ಬುಲಾವ್ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಧಿಡೀರ್ ದೆಹಲಿಯತ್ತ ಹೊರಟಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು, ಕುತೂಹಲ ಮೂಡಿಸಿದೆ.
ದೆಹಲಿಗೆ ಪ್ರಯಾಣ ಬೆಳೆಸಿದ ಡಿಸಿಎಂ ಡಿಕೆಶಿ ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.