ಐಬಿಪಿಎಸ್, ವಿವಿಧ ಬ್ಯಾಂಕುಗಳ ಗುಮಾಸ್ತ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳ ಕ್ಲರ್ಕ್ ಹುದ್ದೆಗಳ ಭರ್ತಿ ನಡೆಯಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ 1557. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ibpsonline.ibps.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (ಸಿಆರ್‌ಪಿ) ಮೂಲಕ ನಡೆಯಲಿದೆ. ಅಧಿಕೃತ ವೆಬ್‌ಸೈಟ್ ಪ್ರಕಾರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 23. ಅರ್ಜಿ ನಮೂನೆಯ ಸುಧಾರಣೆ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 23 ಆಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಬೇಕು.
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿ ವೆಬ್ಸೈಟ್ ನಲ್ಲಿ ಲಭ್ಯವಿದೆ. ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಯಾವುದೇ ಹುದ್ದೆಗಳ ಭರ್ತಿ ನಡೆಯುತ್ತಿಲ್ಲ. ಅಸ್ಸಾಂ ಮತ್ತು ಆಂಧ್ರದಲ್ಲಿ 20 ಹುದ್ದೆಗಳ ಭರ್ತಿಯಾಗ್ತಿದೆ. ದೆಹಲಿ ಮತ್ತು ಎನ್ಸಿಆರ್ ನಲ್ಲಿ 67 ಹುದ್ದೆಗಳ ಭರ್ತಿ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 334 ಹುದ್ದೆಗಳ ಭರ್ತಿಯಾಗಲಿದೆ. ಮೊದಲು ಅಧಿಕೃತ ವೆಬ್‌ಸೈಟ್ ibpsonline.ibps.in ಗೆ ಭೇಟಿ ನೀಡಿ. ಈಗ ನೋಂದಣಿ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ.
ಪ್ರಾಥಮಿಕ ಪರೀಕ್ಷೆಯ ಡಿಸೆಂಬರ್ 5, 12 ಮತ್ತು 13ರಂದು ನಡೆಯಲಿದೆ. ಮುಖ್ಯ ಪರೀಕ್ಷೆಯ ಜನವರಿ 24ರಂದು ನಡೆಯಲಿದೆ. ಪೂರ್ವ ಪರೀಕ್ಷೆಯ ತರಬೇತಿ ನವೆಂಬರ್ 23 ರಿಂದ 28 ರವರೆಗೆ ಮತ್ತು ಪ್ರಾಥಮಿಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ನವೆಂಬರ್ 18 ರಿಂದ ನೀಡಲಾಗುವುದು.