ನವದೆಹಲಿ: ಕೇಂದ್ರ ಸರ್ಕಾರದ ಎರಡನೆಯ ಅವಧಿಯ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಫೆಬ್ರವರಿ 10ರಂದು ಮಂಡನೆಯಾಗಲಿದೆ.
ಈ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡುವ ನಿರೀಕ್ಷೆ ಇದೆ. ಹಾಲಿ ತೆರಿಗೆ ನೀತಿಯ ಪ್ರಕಾರ ವಾರ್ಷಿಕ 2.50 ಲಕ್ಷ ರೂ.ವರೆಗೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ. ನಂತರದ ಆದಾಯಕ್ಕೆ ತೆರಿಗೆ ಪಾವತಿಸಬೇಕಿದೆ.
ಹಣ ದುಬ್ಬರ ದುಬಾರಿಯಾಗಿ ಜೀವನ ನಿರ್ವಹಣೆ ವೆಚ್ಚ ಅಧಿಕವಾಗಿದ್ದರೂ ಆದಾಯ ತೆರಿಗೆ ಹೊರೆ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸಿ ಜನರ ಕೈಗೆ ಹಣ ನೀಡುವಂತೆ ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಮೊದಲು ಮಂಡನೆಯಾಗುವ ಕೊನೆಯ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಮಹತ್ವದ ಕೊಡುಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ತೆರಿಗೆ ವಿನಾಯಿತಿ ಹೆಚ್ಚಳ ಮಾಡಿದಲ್ಲಿ ತೆರಿಗೆದಾರರಿಗೆ ಹಣ ಉಳಿತಾಯವಾಗಿ ಹೂಡಿಕೆ ಯೋಜನೆಗಳಲ್ಲಿ ತೊಡಗಿಸುತ್ತಾರೆ. ಹೀಗಾಗಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲು ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.