ನವದೆಹಲಿ: 2020 – 21 ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ಪಡಿತರ ಅಂಗಡಿಗಳ ಮೂಲಕ ಮಾರಾಟ ಮಾಡುವ ಆಹಾರ ಧಾನ್ಯಗಳ ಬೆಲೆ ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಆಹಾರ ಧಾನ್ಯಗಳ ಸಬ್ಸಿಡಿಗೆ ನೀಡಲಾಗುತ್ತಿರುವ ಹಣದ ಮೊತ್ತ ನಿಭಾಯಿಸಲು ಸಾಧ್ಯವಾಗದಷ್ಟು ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.
ಸಾರ್ವಜನಿಕ ಪಡಿತರ ವ್ಯವಸ್ಥೆಯ ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಆಶಯದಂತೆ ನ್ಯಾಯಬೆಲೆ ಅಂಗಡಿಗಳ ಮೂಲಕ ಆಹಾರ ಧಾನ್ಯಗಳನ್ನು ಸಬ್ಸಿಡಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಒಂದು ಕೆಜಿ ಅಕ್ಕಿಗೆ 3 ರೂಪಾಯಿ, 1 ಕೆಜಿ ಗೋದಿಗೆ 2 ರೂ.ನೀಡುತ್ತಿದ್ದು, 80 ಕೋಟಿಗಿಂತ ಹೆಚ್ಚು ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಆಹಾರ ಭದ್ರತೆಯ ಬದ್ಧತೆಯ ಕಾರಣದಿಂದ ಧಾನ್ಯಗಳ ನಿರ್ವಹಣೆಯ ಆರ್ಥಿಕ ಹೊರೆ ಕಡಿಮೆ ಮಾಡುವುದು ಕಷ್ಟ. ಆದರೆ, ನ್ಯಾಯಬೆಲೆ ಅಂಗಡಿಗಳ ಮೂಲಕ ಮಾರಾಟವಾಗುವ ಧಾನ್ಯಗಳ ಬೆಲೆಯನ್ನು ಪರಿಷ್ಕರಿಸಬೇಕಿದೆ ಎಂದು ಹೇಳಲಾಗಿದೆ.