
ನವದೆಹಲಿ: ಮುಂದಿನ 3-4 ವರ್ಷಗಳಲ್ಲಿ ಭಾರತ ವಿಶ್ವದ ನಂಬರ್ ಒನ್ ಆಟೋಮೊಬೈಲ್ ಉತ್ಪಾದನಾ ಕೇಂದ್ರವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಅವರು ನಿನ್ನೆ ಜೆಕ್ ಗಣರಾಜ್ಯದ ಪ್ರೇಗ್ ನಲ್ಲಿ ಭಾರತೀಯ ಡಯಾಸ್ಪೊರಾದೊಂದಿಗೆ ಸಂವಾದ ನಡೆಸುವಾಗ ಮಾತನಾಡಿ, ಮುಂದಿನ 3 ರಿಂದ 4 ವರ್ಷಗಳಲ್ಲಿ ಭಾರತವು ವಿಶ್ವದ ನಂಬರ್ ಒನ್ ಆಟೋಮೊಬೈಲ್ ಉತ್ಪಾದನಾ ಕೇಂದ್ರವಾಗಲು ಗುರಿಯನ್ನು ಹೊಂದಿದೆ ಎಂದರು.
ಕಳೆದ 9 ವರ್ಷಗಳಲ್ಲಿ ಆಟೋಮೊಬೈಲ್ ಉದ್ಯಮದ ಗಾತ್ರವು 4.5 ಲಕ್ಷ ಕೋಟಿ ರೂಪಾಯಿಗಳಿಂದ 12.5 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಈ ಉದ್ಯಮವು ದೇಶದ 4.5 ಕೋಟಿ ಯುವಕರಿಗೆ ಉದ್ಯೋಗ ನೀಡಿದೆ ಎಂದು ಹೇಳಿದ್ದಾರೆ.