alex Certify
ಕನ್ನಡ ದುನಿಯಾ       Mobile App
       

Kannada Duniya

24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ರೈಲ್ವೆ ಟಿಕೆಟ್ ಬುಕ್

ಭಾರತೀಯ ರೈಲ್ವೆ ಜೂನ್ 1 ರಿಂದ 230 ಪ್ಯಾಸೆಂಜರ್ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಟಿಕೆಟ್ ಕಾಯ್ದಿರಿಸುವಿಕೆ ಗುರುವಾರ ಆರಂಭವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ  ಈ 230 ರೈಲುಗಳಿಗೆ ಕಳೆದ 24 ಗಂಟೆಗಳಲ್ಲಿ 13 ಲಕ್ಷಕ್ಕೂ ಹೆಚ್ಚು ಟಿಕೆಟ್ ಕಾಯ್ದಿರಿಸಲಾಗಿದೆ.

ಮೇ 21 ರಂದು ರೈಲ್ವೆ ಎಲ್ಲಾ 230 ಪ್ಯಾಸೆಂಜರ್ ರೈಲುಗಳಿಗೆ ಎಲ್ಲಾ ವಿಭಾಗಗಳಲ್ಲಿ ಬುಕಿಂಗ್ ವಿಂಡೋವನ್ನು ತೆರೆದಿದೆ. ಆನ್‌ಲೈನ್ ಬುಕಿಂಗ್ ಮತ್ತು ರೈಲ್ವೆ ಮೀಸಲಾತಿ ಕೌಂಟರ್‌ಗಳ ಮೂಲಕ ಮೀಸಲಾತಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ನಿನ್ನೆಯಿಂದ 13 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ ಟಿಕೆಟ್ ಕಾಯ್ದಿರಿಸುವಿಕೆಯು ಪ್ರಾರಂಭವಾದ ತಕ್ಷಣ, ಮೊದಲ ಗಂಟೆಯಲ್ಲಿ 1.5 ಲಕ್ಷ ಟಿಕೆಟ್‌ಗಳನ್ನು ಕಾಯ್ದಿರಿಸಲಾಗಿದೆ. ಅದೇ ಸಮಯದಲ್ಲಿ ಮೊದಲ ಎರಡೂವರೆ ಗಂಟೆಗಳಲ್ಲಿ 4 ಲಕ್ಷ ಟಿಕೆಟ್ ಕಾಯ್ದಿರಿಸಲಾಗಿದೆ.

ಪ್ರಯಾಣಿಕರು ಆನ್‌ಲೈನ್‌ನಲ್ಲಿ ಐಆರ್‌ಸಿಟಿಸಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆಪ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು. ಅಷ್ಟೇ ಅಲ್ಲದೆ ಅಂಚೆ ಕಚೇರಿ, ಪ್ರಯಾಣಿಕರ ಟಿಕೆಟ್ ಸೌಲಭ್ಯ ಕೇಂದ್ರ, ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ  ಮತ್ತು ಸಾಮಾನ್ಯ ಸೇವಾ ಕೇಂದ್ರಗಳಿಂದಲೂ ಟಿಕೆಟ್ ಕಾಯ್ದಿರಿಸಬಹುದು. ಜೂನ್ 1 ರಿಂದ ಪ್ರತಿದಿನ 230 ರೈಲುಗಳನ್ನು ಓಡಿಸಲು ರೈಲ್ವೆ ನಿರ್ಧರಿಸಿದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...