ಮುಂಬೈ: ದೇಶದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್ ನಿಂದ 55 ಸಾವಿರಕ್ಕೂ ಅಧಿಕ ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುವುದು.
ಕಂಪನಿಯ ಸಿಇಒ ಸಲೀಲ್ ಪಾರೇಖ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 2022 -23ನೇ ಆರ್ಥಿಕ ವರ್ಷದಲ್ಲಿ ಕಾಲೇಜುಗಳಿಂದ ನೇರವಾಗಿ 55 ಸಾವಿರಕ್ಕೂ ಅಧಿಕ ಪದವೀಧರರನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಇಂಜಿನಿಯರಿಂಗ್ ಮತ್ತು ವಿಜ್ಞಾನ ಪದವೀಧರರಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿವೆ. ಕಂಪನಿಯ ವರಮಾನ ಶೇಕಡ 20ರಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು ಹೊಸಬರನ್ನು ನೇಮಕ ಮಾಡಿಕೊಳ್ಳಲು ಹೆಚ್ಚಿನ ಅವಕಾಶ ಸಿಗುತ್ತದೆ. ಹೊಸದಾಗಿ ಕೆಲಸಕ್ಕೆ ನೇಮಕವಾದವರಿಗೆ 6 – 12 ವಾರಗಳ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.