alex Certify ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: 20 ಸಾವಿರ ಹುದ್ದೆಗಳ ನೇಮಕಕ್ಕೆ ಮುಂದಾದ ಮತ್ತೊಂದು ಕಂಪನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: 20 ಸಾವಿರ ಹುದ್ದೆಗಳ ನೇಮಕಕ್ಕೆ ಮುಂದಾದ ಮತ್ತೊಂದು ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿವೆ. ಹೀಗಾಗಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಜೊತೆಗೆ ಸದ್ಯಕ್ಕೆ ಹೊಸಬರಿಗೆ ಉದ್ಯೋಗ ಸಿಗುವುದು ಕಷ್ಟ ಎಂಬ ಮಾತುಗಳು ಕೇಳಿಬರುತ್ತಿದ್ದವು.

ಆದರೆ ಮಹತ್ವದ ಬೆಳವಣಿಗೆಯೊಂದರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್, 40000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಪ್ರಮುಖ ಐಟಿ ಕಂಪನಿ 20000 ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದೆ.

ದೇಶದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಬೆಂಗಳೂರು ಮೂಲದ ಇನ್ಫೋಸಿಸ್ 20 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಿಸಿದೆ. ಮಹತ್ವದ ಸಂಗತಿಯೆಂದರೆ ಕೊರೊನಾ ಲಾಕ್ ಡೌನ್ ಅವಧಿಯಲ್ಲೂ ಇನ್ಫೋಸಿಸ್ 4000 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿತ್ತು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...