ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಿ ವಿವಿಧ ವಲಯದ ನೌಕರರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹೋಂ ಗಾರ್ಡ್ಸ್, ಪೌರರಕ್ಷಣೆ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಬಂಧಿಖಾನೆ ಸಿಬ್ಬಂದಿ, ಪೌರಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, ಸಂಬಂಧಿಸಿದ ವಾಹನಗಳ ಚಾಲಕರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮಾರ್ಗಸೂಚಿಯನ್ವಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮೃತಪಟ್ಟರೆ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.