ನವದೆಹಲಿ: ಆರ್‌ಬಿಐ ರೆಪೊ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಸಾಲದ ಬಡ್ಡಿ ದರ ಏರಿಕೆಯಾಗಿದೆ. ಅನೇಕ ಬ್ಯಾಂಕುಗಳು ಸಾಲದ ಬಡ್ಡಿ ದರವನ್ನು ಹೆಚ್ಚಳ ಮಾಡಿವೆ. ಇದೇ ವೇಳೆ ಠೇವಣಿ ಬಡ್ಡಿ ದರ ಕೂಡ ಏರಿಕೆಯಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹೆಚ್.ಡಿ.ಎಫ್.ಸಿ. ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್ ಮೊದಲಾದ ಬ್ಯಾಂಕುಗಳು ವಿವಿಧ ಠೇವಣಿಗಳ ಮೇಲಿನ ಬಡ್ಡಿ ದರ ಪರಿಷ್ಕರಣೆ ಮಾಡಿವೆ.
ಅವಧಿ ಹಾಗೂ ಠೇವಣಿ ಮೊತ್ತದ ಆಧಾರದ ಮೇಲೆ ಬಡ್ಡಿ ದರಗಳನ್ನು ಹೆಚ್ಚಳ ಮಾಡಲಾಗಿದೆ. ಎರಡು ಕೋಟಿ ರೂಪಾಯಿಯವರೆಗಿನ ವಿವಿಧ ಕಾಲಮಿತಿ ಠೇವಣಿಗಳ ಬಡ್ಡಿ ದರದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಠೇವಣಿ ಬಡ್ಡಿ ದರ ಏರಿಕೆಯಾಗಿದೆ.