ಬೆಂಗಳೂರು: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಯೋಜನೆ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಸಚಿವರು, 5 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ದರದ ಬೆಳೆ ಸಾಲ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಸದ್ಯದಲ್ಲಿಯೇ ರಾಜ್ಯಪಾಲರ ಅನುಮತಿ ದೊರೆಯಲಿದ್ದು, ಏಪ್ರಿಲ್ 1ರಿಂದ ಅನ್ವಯವಾಗುವಂತೆ ಯೋಜನೆ ಜಾರಿ ಆಗಲಿದೆ. 33 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.