ನವದೆಹಲಿ: ಅಂತರರಾಷ್ಟ್ರೀಯ ಚಾಲನಾ ಪರವಾನಿಗೆ(ಇಂಟರ್ ನ್ಯಾಷನಲ್ ಡ್ರೈವಿಂಗ್ ಪರ್ಮಿಟ್ -ಐಡಿಪಿ) ಆನ್ಲೈನ್ ಮೂಲಕ ನವೀಕರಣಕ್ಕೆ ಅವಕಾಶ ಒದಗಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ.
ಭಾರತೀಯರು ವಿದೇಶದಲ್ಲಿರುವ ಸಂದರ್ಭದಲ್ಲಿ ಅಂತರಾಷ್ಟ್ರೀಯ ಚಾಲನಾ ಪರವಾನಿಗೆ ಅವಧಿ ಮುಗಿದಿದ್ದರೆ ಆನ್ಲೈನ್ ಮೂಲಕ ನವೀಕರಣಕ್ಕೆ ಅವಕಾಶ ನೀಡಲಾಗುತ್ತದೆ. ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವಾಲಯದ ವತಿಯಿಂದ ಜನವರಿ 7 ರಂದು ಈ ಸಂಬಂಧ ನೋಟಿಫಿಕೇಶನ್ ಹೊರಡಿಸಲಾಗಿದೆ.
ಭಾರತೀಯರು ವಿದೇಶದಲ್ಲಿದ್ದಾಗ ಚಾಲನಾ ಪರವಾನಿಗೆ ಅವಧಿ ಮುಗಿದಿದ್ದರೆ ಭಾರತೀಯ ರಾಯಭಾರ ಕಚೇರಿ ಮೂಲಕ ನವೀಕರಣಕ್ಕೆ ಅರ್ಜಿ ಸಲ್ಲಿಸಬಹುದು. ಅವರಿರುವಲ್ಲಿಗೆ ಅಂತರಾಷ್ಟ್ರೀಯ ಚಾಲನಾ ಪರವಾನಿಗಿಯನ್ನು ಕೊರಿಯರ್ ಮೂಲಕ ಕಳುಹಿಸಲಾಗುವುದು ಎಂದು ಹೇಳಲಾಗಿದೆ.