ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಮಹಿಳೆಯರಿಗೆ ಖುಷಿ ಸುದ್ದಿ ನೀಡಿದೆ. ಮಹಿಳಾ ಅಧಿಕಾರಿಗಳ ವಿಶೇಷ ನೇಮಕಾತಿ ಬಗ್ಗೆ ಘೋಷಣೆ ಮಾಡಿದೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಭಾರತದ ಅತಿದೊಡ್ಡ ವಿದ್ಯುತ್ ಕಂಪನಿಯಾದ ಎನ್‌ಟಿಪಿಸಿ ಲಿಮಿಟೆಡ್, ವಿಶೇಷ ಅಭಿಯಾನದಲ್ಲಿ ಮಹಿಳಾ ಅಧಿಕಾರಿಗಳನ್ನು ಮಾತ್ರ ನೇಮಕಾತಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದೆ.
ಕಂಪನಿಯ ಹೇಳಿಕೆಯ ಪ್ರಕಾರ, ಇದು ಭಾರತದ ಅತಿದೊಡ್ಡ ವಿದ್ಯುತ್ ಉತ್ಪಾದನಾ ಕಂಪನಿಯಾಗಿದ್ದು, ಈಗ ಈ ಕಂಪನಿಯು ಮಹಿಳಾ ಶಕ್ತಿಯನ್ನು ಮತ್ತಷ್ಟು ಬಲಪಡಿಸಲಿದೆ. ಲಿಂಗ ತಾರತಮ್ಯವನ್ನು ಕಡಿಮೆ ಮಾಡಲು ಕಂಪನಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಹೆಚ್ಚಿನ ಮಹಿಳಾ ಅಭ್ಯರ್ಥಿಗಳನ್ನು ಆಕರ್ಷಿಸಲು ಕಂಪನಿ ಸೂಕ್ತ ಕ್ರಮಕೈಗೊಂಡಿದೆ. ನೇಮಕಾತಿ ಸಮಯದಲ್ಲಿ ಮಹಿಳಾ ಉದ್ಯೋಗಿಗಳಿಗೆ ಅರ್ಜಿ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗಿದೆ.
ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು, ಎನ್‌ಟಿಪಿಸಿ ಮಕ್ಕಳ ಆರೈಕೆಗಾಗಿ ಪಾವತಿಸಿದ ರಜೆ, ಮಾತೃತ್ವ ರಜೆ, ವಿಶ್ರಾಂತಿ ರಜೆ ಮತ್ತು ಎನ್‌ಟಿಪಿಸಿ ವಿಶೇಷ ಮಕ್ಕಳ ಆರೈಕೆ ರಜೆಯನ್ನು ನೀಡ್ತಿದೆ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ ಇತ್ತೀಚೆಗೆ ಸಹಾಯಕ ಎಂಜಿನಿಯರ್ ಮತ್ತು ಸಹಾಯಕ ರಸಾಯನಶಾಸ್ತ್ರಜ್ಞ ಹುದ್ದೆಗಳಿಗೆ ಅರ್ಜಿ ಕೋರಿದೆ. ಅರ್ಜಿ ಸಲ್ಲಿಸಲು ಕೇವಲ ಎರಡು ದಿನಗಳು ಬಾಕಿ ಇದೆ. ಎನ್‌ಟಿಪಿಸಿಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.