ಬೆಂಗಳೂರು: ನವೆಂಬರ್ ನಲ್ಲಿ ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ ನಡೆಯಲಿದ್ದು, ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಲಾಗುವುದು ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ನವೆಂಬರ್ ನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಹೂಡಿಕೆದಾರರನ್ನು ಸೆಳೆಯಲು ವಿದೇಶಗಳಲ್ಲಿ ರೋಡ್ ಶೋ ಸೇರಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಅದಾಲತ್ ನಡೆಸಿ ಉದ್ಯಮಿಗಳ ಅಹವಾಲು ಆಲಿಸಲಾಗುವುದು. ಬಳಕೆಯಾಗದ ಕೈಗಾರಿಕೆ ಭೂಮಿಯನ್ನು ವಾಪಸ್ ಪಡೆಯಲಾಗುವುದು. ಹಣ ಪಾವತಿಸಿದವರಿಗೆ ಕೈಗಾರಿಕೆ ಆರಂಭಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.