alex Certify ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಿಮೆ ಪಾಲಿಸಿದಾರರಿಗೆ ಪಾಲಿಸಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನೀಡುವಂತೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.

ವಿಮೆ ಕಂಪನಿಗಳು ಡಿಜಿ ಲಾಕರ್ ಬಳಕೆಯ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಬೇಕು. ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿ ಹೇಗೆ ಇಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಪಾಲಿಸಿದಾರರಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ವಿಮೆ ಕಂಪನಿಗಳಿಗೆ ಈ ಕುರಿತು ಸೂಚನೆ ನೀಡಿದ್ದು, ಡಿಜಿಟಲ್ ರೂಪದಲ್ಲಿ ನೀಡಬೇಕು. ಇದರಿಂದಾಗಿ ವಿಮೆ ಕ್ಲೇಮ್ ಪ್ರಕ್ರಿಯೆಗಳಿಗೆ ಅನುಕೂಲವಾಗುತ್ತದೆ. ವೆಚ್ಚ ಕೂಡ ಕಡಿಮೆಯಾಗಲಿದ್ದು, ಗ್ರಾಹಕರಿಗೆ ದಾಖಲೆ ಸಿಕ್ಕಿಲ್ಲ ಎನ್ನುವ ದೂರು, ವ್ಯಾಜ್ಯ ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...