alex Certify ಚಂದ್ರಯಾನ -3 ಸಂಪೂರ್ಣ ಯಶಸ್ಸು ಸಾಧಿಸುವ ವಿಶ್ವಾಸ: ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಯಾನ -3 ಸಂಪೂರ್ಣ ಯಶಸ್ಸು ಸಾಧಿಸುವ ವಿಶ್ವಾಸ: ಮಾಜಿ ಸಿಎಂ ಕುಮಾರಸ್ವಾಮಿ

ಚಂದ್ರಯಾನ 3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದು, ವಿಜ್ಞಾನಿಗಳ ಸಾಧನೆ ಶ್ಲಾಘಿಸಿದ್ದಾರೆ.

ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಭಾರತ ಹೆಮ್ಮೆಪಡುತ್ತದೆ. 45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. 2.35ಕ್ಕೆ ಆಂಧ್ರದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡ್ದಯನ ಮಾಡಿದ ಇಸ್ರೋ ಈ ಪ್ರಯತ್ನದಲ್ಲಿ ಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.

ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ. ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ. ಈ ಜಗತ್ತು, ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ ಎಂದು ತಿಳಿಸಿದ್ದಾರೆ.

ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್’ಗೆ ಚಾಲನೆ ದೊರೆತಿದೆ. ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಸೇರಿ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಇತರೆ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...