ನವದೆಹಲಿ: ಆದಾಯ ತೆರಿಗೆ ಪೋರ್ಟಲ್ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ. ಬಳಕೆದಾರರಿಗೆ ಈಗಲೂ ತೊಂದರೆ ಉಂಟಾಗುತ್ತಿದೆ ಎಂದು ಹೇಳಲಾಗಿದೆ.
ತೆರಿಗೆ ಇಲಾಖೆ ಸಹಯೋಗದಲ್ಲಿ ಬಳಕೆದಾರರಿಗೆ ಅನುಕೂಲವಾಗುವಂತೆ ತ್ವರಿತಗತಿಯ ಕ್ರಮಕೈಗೊಳ್ಳಲಾಗಿದೆ ಎಂದು ಇನ್ಫೋಸಿಸ್ ಕಂಪನಿ ತಿಳಿಸಿದೆ.
ಐಟಿ ಪೋರ್ಟಲ್ ನಲ್ಲಿ ಉಂಟಾದ ದೋಷದಿಂದ ತೆರಿಗೆ ಪಾವತಿದಾರರಿಗೆ ಸಮಸ್ಯೆಯಾಗಿತ್ತು. ಅದನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಾಲತಾಣ ಬಳಕೆಯಲ್ಲಿ ಹೆಚ್ಚಳವಾಗಿದೆ. 3 ಕೋಟಿಗೂ ಹೆಚ್ಚು ತೆರಿಗೆದಾರರು ಪೋರ್ಟಲ್ ಗೆ ಲಾಗಿನ್ ಆಗುವ ಮೂಲಕ ಯಶಸ್ವಿಯಾಗಿ ವಹಿವಾಟು ನಡೆಸಿದ್ದಾರೆ ಎಂದು ಹೇಳಲಾಗಿದೆ.
ತಾಂತ್ರಿಕ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಪ್ರಯತ್ನ ನಡೆಸಲಾಗಿದೆ. ತೆರಿಗೆ ಪಾವತಿದಾರರು, ಪೋರ್ಟಲ್ ಬಳಕೆದಾರರ ನೇರ ಸಂಪರ್ಕದೊಂದಿಗೆ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎನ್ನಲಾಗಿದೆ.