ನವದೆಹಲಿ: ಆದಾಯ ತೆರಿಗೆ ಪಾವತಿಗೆ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.
ತೆರಿಗೆ ಉಳಿತಾಯದ ಹೂಡಿಕೆಗಳಿಗೆ ಗಡುವನ್ನು ಜುಲೈ 31 ರವರೆಗೆ ಎರಡು ದಿನಗಳ ಹಿಂದೆ ವಿಸ್ತರಿಸಲಾಗಿತ್ತು. ಇದರಿಂದ ತೆರಿಗೆದಾರರು ತಮ್ಮ ಹಣವನ್ನು ಯೋಜನೆಗಳಿಗೆ ಹಾಕಿ ತೆರಿಗೆ ಹೊರೆ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎನ್ನಲಾಗಿದೆ. ಸದ್ಯದ ಪರಿಸ್ಥಿತಿಯನ್ನು ಮನಗಂಡ ಐಟಿ ಇಲಾಖೆ ನವೆಂಬರ್ 30ರವರೆಗೆ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ ಮಾಡಿದೆ.