
ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವೈಯಕ್ತಿಕ ತೆರಿಗೆದಾರರ ತೆರಿಗೆ ವಿವರ(ಐಐಟಿಆರ್) ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿವರ ಸಲ್ಲಿಸಲು ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ.
ವೈಯಕ್ತಿಕ ತೆರಿಗೆದಾರರು ಐಟಿಆರ್ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿತ್ತು. ಇದನ್ನು ಮತ್ತೆ 10 ದಿನಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ. 2019 – 20 ನೇ ಸಾಲಿನ ಆರ್ಥಿಕ ವರ್ಷದ ವಿವರಗಳನ್ನು ಸಲ್ಲಿಸುವ ಅವಧಿಯನ್ನು ಜನವರಿ 10 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಜಿಎಸ್ಟಿ ವಾರ್ಷಿಕ ರಿಟರ್ನ್ ಸಲ್ಲಿಕೆ ಅವಧಿಯನ್ನು 2021ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.