
ನವದೆಹಲಿ: ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆರಿಗೆ ಇಲಾಖೆಯಿಂದ ಐಟಿಆರ್ ಗಡುವು ಮತ್ತೆ ವಿಸ್ತರಣೆ ಮಾಡಲಾಗಿದೆ.
2022- 23ನೇ ಸಾಲಿನ ಐಟಿಆರ್ ಸಲ್ಲಿಕೆಗೆ ಮೊದಲು ಜುಲೈ 31ರವರೆಗೆ ಗಡುವು ನೀಡಲಾಗಿತ್ತು. ಆದರೆ, ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಅನೇಕರಿಗೆ ಸಾಧ್ಯವಾಗಿಲ್ಲ. ಹೀಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಡಿಸೆಂಬರ್ 31ರವರೆಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ತೆರಿಗೆದಾರರು ತಡವಾದ ಮತ್ತು ಪರಿಷ್ಕೃತ ಐಟಿಆರ್ ಅನ್ನು ಡಿಸೆಂಬರ್ 31 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.