ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡು ಸುಮಾರು 5000 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
FKCCI ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಂದೇ ದಿನ ಎಲ್ಲಾ ರೀತಿಯ ವ್ಯಾಪಾರ ವಾಣಿಜ್ಯ ಮತ್ತು ಕೈಗಾರಿಕೆಗಳಿಂದ ಸಂಗ್ರಹವಾಗುತ್ತಿದ್ದ 400 ಕೋಟಿ ರೂ.ಗೂ ಅಧಿಕ ತೆರಿಗೆ ಹಣಕ್ಕೆ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದೆ. ರಾಜ್ಯಾದ್ಯಂತ ವ್ಯಾಪಾರ ವಾಣಿಜ್ಯ ಕೈಗಾರಿಕಾ ವಲಯದ ಶೇಕಡ 70ರಷ್ಟು ಉದ್ಯಮಿಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದಾರೆ. ಎಫ್.ಕೆ.ಸಿ.ಸಿ.ಐ. ಸಂಪೂರ್ಣ ಬೆಂಬಲ ನೀಡಿತ್ತು. ಬಂದ್ ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ 400 ಕೋಟಿ ರೂ.ಗೂ ಅಧಿಕ ನಷ್ಟು ನಷ್ಟವಾಗಿದೆ. ವಾಣಿಜ್ಯ ವಹಿವಾಟು ಸ್ಥಗಿತದಿಂದ ಸುಮಾರು 5000 ಕೋಟಿ ರೂ. ನಷ್ಟು ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.