ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸೂಚನೆ ನೀಡಿದ್ದಾರೆ.
ಇಂಧನ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಮತ್ತು ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಎಲ್ಲವೂ ಆರ್ಥಿಕತೆಯ ಮೇಲೆ ಅವಲಂಬಿತವಾಗಿದೆ. ನಾನು ಆರ್ಥಿಕ ಪರಿಶೀಲನಾ ಸಭೆಯನ್ನು ಕರೆದಿದ್ದೇನೆ. ಆರ್ಥಿಕ ಪರಿಸ್ಥಿತಿ ಉತ್ತಮವೆಂದು ತೋರುತ್ತಿದ್ದರೆ, ಪರಿಗಣನೆಗೆ ಎಲ್ಲ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.
ಈ ಹಿಂದೆ, ರಾಜ್ಯದಲ್ಲಿ ಇಂಧನದ ಮೇಲಿನ ಯಾವುದೇ ತೆರಿಗೆ ವಿನಾಯಿತಿಯನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದರು. ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಮತ್ತೆ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆಯು 105.84 ರೂ. ಮತ್ತು ಮುಂಬೈನಲ್ಲಿ ಪ್ರತಿ ಲೀಟರ್‌ಗೆ 111.77 ರೂ. ಆಗಿದೆ.