ಬೆಂಗಳೂರು: ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ ಐದು ಪೈಸೆ ಹೆಚ್ಚಳ ಮಾಡಿದ್ದೇವೆ ಎಂದು ವಿದ್ಯುತ್ ದರ ಏರಿಕೆಯ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಆದಾಯ ಕೊರತೆಯನ್ನು ಸರಿದೂಗಿಸಲು ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಈ ಬಾರಿ ಶೇಕಡ 4.33 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಸರಾಸರಿ ಪ್ರತಿ ಯೂನಿಟ್ ಗೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಇಂಧನ ವೆಚ್ಚ ಸೇರಿದಂತೆ ಒಟ್ಟು 35 ಪೈಸೆ ಏರಿಕೆ ಮಾಡಲಾಗಿದೆ.
ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ವಿನಾಯಿತಿ ನೀಡಲಾಗುವುದು. ಒಂದು ವರ್ಷದವರೆಗೆ ಮಾಸಿಕ ಇಂಧನ ಬಳಕೆಯಲ್ಲಿ ರಿಯಾಯಿತಿ ನೀಡಲಾಗುತ್ತದೆ. ಇಂಧನ ಬಳಕೆಯಲ್ಲಿ ಪ್ರತಿ ಯೂನಿಟ್ ಗೆ 50 ಪೈಸೆ ರಿಯಾಯಿತಿ ನೀಡಲಾಗುವುದು. ಸೀಸನಲ್ ಇಂಡಸ್ಟ್ರೀಸ್ ಗಳಿಗೆ ಯೂನಿಟ್ ಗೆ ಒಂದು ರೂಪಾಯಿ ವಿನಾಯಿತಿ ನೀಡಲಾಗುವುದು. ರಿಯಾಯಿತಿ ಇಂಧನ ದರ ಯೋಜನೆ ಮುಂದುವರೆಸಲಾಗುವುದು. ವಿದ್ಯುತ್ ವಾಹನಗಳ ಚಾರ್ಜಿಂಗ್ ದರ ಏರಿಕೆ ಇರುವುದಿಲ್ಲ. ಹಾಲಿ ದರವೇ ಮುಂದುವರೆಯಲಿದೆ ಎಂದು ಕೆಇಆರ್ಸಿ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.