
ಶಿವಮೊಗ್ಗ: ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳ ವಿವರಗಳನ್ನು ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಧನ ನೀಡುವ ಸಲುವಾಗಿ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ತಮ್ಮ ಸೂಕ್ತ ದಾಖಲೆ/ವಿವರಗಳನ್ನು FRUITS ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಿದೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಹಕ್ಕುಪತ್ರದ ಪ್ರತಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ತಕ್ಷಣ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.