ಬೆಳಗಾವಿ: ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ 12 ಲಕ್ಷ ಎಮ್ಮೆ, ಹಸುಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ವಿಮೆ ಸೌಲಭ್ಯ ಹೊಂದಿರುವ ಜಾನುವಾರು ಮೃತಪಟ್ಟಲ್ಲಿ ಹಾಲು ಉತ್ಪಾದಕರಿಗೆ 40 -50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.