alex Certify ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ದರ ಏರಿಕೆ ಶಾಕ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ದರ ಏರಿಕೆ ಶಾಕ್…?

ಹೊಸಪೇಟೆ: ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಎಲ್ಲಾ ರಾಜ್ಯಕ್ಕಿಂತ ನಂದಿನಿ ಹಾಲಿನ ದರ 12 -16 ರೂಪಾಯಿ ಕಡಿಮೆ ಇದೆ ಎಂದು ಹೇಳಿದ್ದಾರೆ.

ದರ ಏರಿಕೆ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ದರ ಹೆಚ್ಚಳ ಮಾಡಲಾಗಿತ್ತು. ಆಗ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸದ್ಯಕ್ಕೆ ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪ ಸಲ್ಲಿಸಿಲ್ಲ ಎಂದು ಭೀಮಾ ನಾಯಕ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...