ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಎಲ್.ಇ.ಡಿ. ಬಲ್ಬ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ಎಲ್ಇಡಿ ಬಲ್ಬ್ ತಯಾರಿಕೆಯಲ್ಲಿ ಬಳಕೆ ಮಾಡುವ ವಸ್ತುಗಳ ಆಮದು ಸುಂಕ ಹೆಚ್ಚಳ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಇಡಿ ಬಲ್ಬ್ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳವಾಗಲಿದೆ.
ಎಲೆಕ್ಟ್ರಿಕ್ ಲ್ಯಾಂಪ್ ಮತ್ತು ಬಿಡಿಭಾಗ ತಯಾರಕರ ಸಂಘದ ಅಧ್ಯಕ್ಷ ಸುಮಿತ್ ಜೋಷಿ ಈ ಬಗ್ಗೆ ಮಾತನಾಡಿ, ಬಲ್ಬ್ ತಯಾರಿಕೆಗೆ ಅಗತ್ಯವಾದಗಿರುವ ಕೆಲವು ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚಿಸುವ ಸರ್ಕಾರದ ತೀರ್ಮಾನದಿಂದ ಬೆಲೆ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬಿಡಿಭಾಗಗಳನ್ನು ಚೀನಾ, ದಕ್ಷಿಣ ಕೊರಿಯಾ, ವಿಯೆಟ್ನಾಂಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಇವುಗಳ ಮೇಲಿನ ಸುಂಕ ಜಾಸ್ತಿಯಾದ್ರೆ ಬಲ್ಬ್ ಬೆಲೆ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.