alex Certify BIG NEWS: ಮಾರ್ಚ್ 5 ರಂದು ಯಡಿಯೂರಪ್ಪ ಬಜೆಟ್..? ಮದ್ಯಪ್ರಿಯರಿಗೆ ಮತ್ತೊಂದು ಬಿಗ್ ಶಾಕ್ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಚ್ 5 ರಂದು ಯಡಿಯೂರಪ್ಪ ಬಜೆಟ್..? ಮದ್ಯಪ್ರಿಯರಿಗೆ ಮತ್ತೊಂದು ಬಿಗ್ ಶಾಕ್ ಸಾಧ್ಯತೆ

ಬೆಂಗಳೂರು: ಮಾರ್ಚ್ ಮೊದಲ ವಾರ ಹಣಕಾಸು ಖಾತೆ ಹೊಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನಲಾಗಿದ್ದು, ಬಹುತೇಕ ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದ್ದು, ಈ ವೇಳೆ ಮದ್ಯದ ಮೇಲೆ ಶೇಕಡ 10 ರವರೆಗೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೊರೋನಾ ಕಾರಣದಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಸರ್ಕಾರ ಆರ್ಥಿಕ ಚೇತರಿಕೆ, ಆದಾಯ ಸಂಗ್ರಹಣೆಗೆ ಒತ್ತು ನೀಡಿದ್ದು, ಇಂಡಿಯನ್ ಮೇಡ್ ಲಿಕ್ಕರ್ ಮತ್ತು ಬಿಯರ್ ಮೇಲೆ ಶೇಕಡ 5 ರಿಂದ 10 ರಷ್ಟು ಅಬಕಾರಿ ಸುಂಕ ಹೆಚ್ಚಲಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅಬಕಾರಿ ಸಚಿವರು, ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಿ ಸುಂಕ ಹೆಚ್ಚಳ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ. ಕಳೆದ ಬಜೆಟ್ ನಲ್ಲಿ ಮದ್ಯದ ಮೇಲೆ ಶೇಕಡ 6 ರಷ್ಟು ಹೆಚ್ಚುವರಿ ಅಬಕಾರಿ ಸುಂಕ ಹೇರಲಾಗಿತ್ತು. ಲಾಕ್ಡೌನ್ ಜಾರಿಯಾಗಿದ್ದ ಕಾರಣ ಮೇ ನಲ್ಲಿ ವೈನ್ ಮತ್ತು ಬಿಯರ್ ಹೊರತುಪಡಿಸಿ ಇಂಡಿಯನ್ ಮೇಡ್ ಲಿಕ್ಕರ್ ಮೇಲೆ ಶೇಕಡ 17 ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ಶೇಕಡ 10 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...