alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಕ್ಕೆ ಸೆ. 9 ರೊಳಗೆ ಅರ್ಜಿ ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಕ್ಕೆ ಸೆ. 9 ರೊಳಗೆ ಅರ್ಜಿ ಸಲ್ಲಿಸಿ

ಕೋಲಾರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತು ಅತಿಸೂಕ್ಷ್ಮ ಹಾಗೂ ಆದಿವಾಸಿ ಸಮುದಾಯಗಳಿಗೆ ನಿಗಮದ 2021-22ನೇ ಸಾಲಿಗೆ ಸ್ವಯಂ ಉದ್ಯೋಗ ಯೋಜನೆ(ನೇರಸಾಲ), ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸೆಪ್ಟೆಂಬರ್ 9 ರ ಸಂಜೆ 5.30 ಗಂಟೆಯೊಳಗೆ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಿ ಸವಲತ್ತು ಪಡೆಯದೆ ಇರುವವರು ಪುನಃ ಹೊಸದಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08152-243561 ರ ಮೂಲಕ ಮಾಹಿತಿ ಪಡೆಯಬಹುದು. ನಿಗಮದ ಜಿಲ್ಲಾ ಕಛೇರಿಯ ಅಧಿಕಾರಿಗಳನ್ನು/ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...