ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದು, ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೋರೋನಾ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನೇಕ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ. ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡಲು ಆರ್ಥಿಕ ಸಮೀಕ್ಷೆಯಲ್ಲಿ ಸಲಹೆ ನೀಡಲಾಗಿದೆ. ಸಂಶೋಧನೆ, ಆರೋಗ್ಯ, ಮೂಲಸೌಕರ್ಯ, ಶಿಕ್ಷಣಕ್ಕೆ ಆದ್ಯತೆ ನೀಡಲಿದ್ದು, ರೈತರ ಸಾಲ ಮನ್ನಾ ಘೋಷಣೆ ಮಾಡುವ ಸಾಧ್ಯತೆ ಇದೆ.
ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡುವ ನಿರೀಕ್ಷೆಯಿದೆ. ಸಾಲ ಪಡೆದ ರೈತರಿಗೆ ದೊಡ್ಡ ರಿಲೀಫ್ ಸಿಗಲಿದೆ. ಅಲ್ಲದೇ ಸರ್ಕಾರದ ಮೇಲೆ ರೈತರ ವಿಶ್ವಾಸ ಹೆಚ್ಚಾಗಲಿದ್ದು, ನೂತನ ಕೃಷಿ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ರೈತರಿಗಿರುವ ಅಸಮಾಧಾನವನ್ನು ನಿವಾರಿಸಲು ಇದು ಸಹಕಾರಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.