ಬೆಂಗಳೂರು: ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ ಕಂತುಗಳ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಲಾಗಿದೆ.
ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಬೆಳೆಸಾಲ ಹಾಗೂ ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ ಕಂತು ಪಾವತಿ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಿಸಲಾಗಿದೆ.
ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 3 ಲಕ್ಷ ರೂಪಾಯಿವರೆಗೆ ಅಲ್ಪಾವಧಿ ಬೆಳೆ ಸಾಲ ಮತ್ತು ಶೇಕಡ 3ರಷ್ಟು ಬಡ್ಡಿದರದಲ್ಲಿ 10 ಲಕ್ಷ ರೂಪಾಯಿವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ ನೀಡಲಾಗಿದ್ದು ಸಾಲ ಮರುಪಾವತಿಗೆ ಜೂನ್ ಅಂತ್ಯದ ವರೆಗೆ ಅವಕಾಶ ನೀಡಲಾಗಿತ್ತು. ಇದನ್ನು ಆಗಸ್ಟ್ ಕೊನೆಯವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಕಾಯಕ ಯೋಜನೆಯಡಿ ಸ್ವಸಹಾಯ ಸಂಘಗಳಿಂದ ನೀಡಿದ ಸಾಲ ಮರುಪಾವತಿ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.