ಬೆಂಗಳೂರು: ರಾಜ್ಯದ 57,000 ರೈತರ 1 ಲಕ್ಷ ರೂಪಾಯಿವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗಿದೆ. ರೈತರ ಖಾತೆಗೆ 295 ಕೋಟಿ ರೂಪಾಯಿ ನೇರ ಹಣ ವರ್ಗಾವಣೆ ಮೂಲಕ ಹಣ ಬಿಡುಗಡೆ ಮಾಡಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಘೋಷಿಸಿದ್ದ ಸಹಕಾರಿ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳಲ್ಲಿ ಒಂದು ಲಕ್ಷ ರೂಪಾಯಿವರೆಗಿನ ಅಲ್ಪಾವಧಿ ಬೆಳೆ ಸಾಲ ಮನ್ನಾ ಯೋಜನೆಯಡಿ ಅರ್ಹತೆಗಾಗಿ ಕಾಯುತ್ತಿದ್ದ 57,229 ರೈತರ ಸಾಲ ಮನ್ನಾ ಮಾಡಲಾಗಿದೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೈತರ ಒಂದು ಲಕ್ಷ ರೂಪಾಯಿವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಸುಮಾರು 16 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನ ಸಿಕ್ಕಿದ್ದು ಉಳಿದವರಿಗೆ ಅನುಕೂಲವಾಗಿರಲಿಲ್ಲ. ಈಗ 57,229 ರೈತರ ಸಾಲ ಮನ್ನಾ ಮಾಡಲಾಗಿದೆ ಎನ್ನಲಾಗಿದೆ.