ಬೆಂಗಳೂರು: ರೈತರಿಗೆ ದೀರ್ಘಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮೂಲಕ ರೈತರಿಗೆ 10 ಲಕ್ಷ ರೂ.ವರೆಗೆ ದೀರ್ಘಾವಧಿ ಸಾಲ ನೀಡುತ್ತಿದ್ದು, ಈ ಮೊತ್ತವನ್ನು ಸರ್ಕಾರ 15 ಲಕ್ಷ ರೂ.ಗೆ ಹೆಚ್ಚಳ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ದೀರ್ಘಾವಧಿ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿ ಹೆಚ್ಚಳ ಮಾಡಿದ್ದು, ಸಾಲದ ಮಿತಿ ಹೆಚ್ಚಳವಾಗಿ ಸಾಲ ಪಡೆಯುವ ರೈತರ ಸಂಖ್ಯೆ ಹೆಚ್ಚಿದೆ.
ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಪ್ರತಿವರ್ಷ ಸರ್ಕಾರದ ಗ್ಯಾರಂಟಿ ಮೇಲೆ ನಬಾರ್ಡ್ ನಿಂದ ಸಾಲ ಪಡೆದು ಪಿಎಲ್‌ಡಿ ಬ್ಯಾಂಕುಗಳಿಗೆ ಕಡಿಮೆ ಬಡ್ಡಿ ದರದಲ್ಲಿ ನೀಡಲಿದೆ. ಬೆಳೆ ಸಾಲದ ಹೊರತಾಗಿ ಭೂ ಅಭಿವೃದ್ಧಿ, ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಖರೀದಿ ಮೊದಲಾದವುಗಳಿಗೆ ಪಿಎಲ್‌ಡಿ ಬ್ಯಾಂಕ್ ಸಾಲ ನೀಡಲಿದೆ. ಈ ವರ್ಷ 1600 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದೆ. ರಾಜ್ಯದಲ್ಲಿ 13 ಸಾವಿರ ರೈತರು ದೀರ್ಘಾವಧಿ ಸಾಲ ಪಡೆಯುತ್ತಿದ್ದು, ಮುಂದಿನ ವರ್ಷ ಹೆಚ್ಚಿನ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ.