alex Certify ಸಾಲದ ನಿರೀಕ್ಷೆಯಲ್ಲಿದ್ದ ಎಲ್ಲಾ ವರ್ಗದವರಿಗೆ ಇಲ್ಲಿದೆ ಗುಡ್ ನ್ಯೂಸ್: 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದ ಎಲ್ಲಾ ವರ್ಗದವರಿಗೆ ಇಲ್ಲಿದೆ ಗುಡ್ ನ್ಯೂಸ್: 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: 2021-22 ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ(ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ, ಉತ್ಪಾದನ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ, ಅಂಗವಿಕಲರು, ಮಹಿಳೆಯರು, ಸಾಮಾನ್ಯ ವರ್ಗ, ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಉದ್ಯೋಗ ಕೈಗೊಳ್ಳುವವರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನೀಂದ ಗರಿಷ್ಟ 25 ಲಕ್ಷ ರೂ.ವರೆಗೆ ಸಾಲ ನೀಡಿ ಗರಿಷ್ಟ ಶೇ.25 ರಿಂದ 35 ರವರೆಗೆ ಸಹಾಯಧನವನ್ನು ನೀಡಲಾಗುವುದು. ಈ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ www.kvic.org.in(ಪಿಎಂಇಜಿಪಿ ಆನ್‍ಲೈನ್ ಅಪ್ಲಿಕೇಶನ್)ನಲ್ಲಿ ಅರ್ಜಿ ಸಲ್ಲಿಸುವಾಗ (ಏಜೆನ್ಸಿ ಕೋಡ್ ಕೆವಿಐಬಿ) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ 2 ಸೆಟ್ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ ಪರಿಗಣಿಸುವುದಿಲ್ಲ.

ಹೆಚ್ಚಿನ ವಿವರಗಳಿಗೆ ಎಚ್.ಆರ್.ರಾಮಕೃಷ್ಣ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಹಾಗೂ  ದೂ.ಸಂ.08272-225946, 9480825630 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...