alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

ಮಡಿಕೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು.

ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ: 08272 225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...