
ನವದೆಹಲಿ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸಾಲದ ಕಂತು ಪಾವತಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಇಎಂಐ ಚಕ್ರಬಡ್ಡಿ ಮನ್ನಾ ಮಾಡಲು ಅಫಿಡವಿಟ್ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ.
ಇಎಂಐ ಚಕ್ರಬಡ್ಡಿ ಮಾತ್ರ ಮನ್ನಾ ಮಾಡುವುದನ್ನು ಒಪ್ಪದ ಸುಪ್ರೀಂಕೋರ್ಟ್ ಹೊಸ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿದೆ.
ವೈಯಕ್ತಿಕ ಸಾಲಗಾರರು ಹಾಗೂ ಸಣ್ಣ ಉದ್ದಿಮೆಗಳ ಸಾಲದ ಮೇಲಿನ ಇಎಂಐ ಪಾವತಿಗೆ ಆರು ತಿಂಗಳು ವಿನಾಯಿತಿ ನೀಡಿದ್ದು ಚಕ್ರ ಬಡ್ಡಿ ಮನ್ನಾ ಮಾಡುವುದಾಗಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆರು ತಿಂಗಳ ಅವಧಿಯ ಬಡ್ಡಿ ಮನ್ನಾ ಮಾಡಬೇಕೆಂದು ಅರ್ಜಿದಾರರು ಸಲ್ಲಿಸಿರುವ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಮಾಣಪತ್ರದಲ್ಲಿ ಉತ್ತರವಿಲ್ಲ. ಹೀಗಾಗಿ ಅಕ್ಟೋಬರ್ 13 ರೊಳಗೆ ಹೊಸ ಅಫಿಡವಿಟ್ ಸಲ್ಲಿಸಬೇಕೆಂದು ಸರ್ಕಾರ ಹಾಗೂ ಆರ್.ಬಿ.ಐ.ಗೆ ತಿಳಿಸಿದೆ ಎನ್ನಲಾಗಿದೆ.