ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2021-22 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಆಟೋ ರಿಕ್ಷಾ, ಟ್ಯಾಕ್ಸಿ, ಸರಕು ವಾಹನ ಖರೀದಿಗೆ ಸಹಾಯಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲು ಆಫ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆಟೋ ರಿಕ್ಷಾ, ಟ್ಯಾಕ್ಸಿ, ಸರಕು ವಾಹನ ಖರೀದಿಗೆ ಸಹಾಯಧನ:
ಈ ಯೋಜನೆಯನ್ನು ಬ್ಯಾಂಕ್ ಸಹಯೋಗದಿಂದ ಅನುಷ್ಠಾನಗೊಳಿಸಲು 75 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಆಟೋ ರಿಕ್ಷಾ, ಟ್ಯಾಕ್ಸಿ, ಸರಕು ವಾಹನ ಖರೀದಿಸಲು ವಾಹನದ ಮೌಲ್ಯ ಕನಿಷ್ಠ 1.50 ಲಕ್ಷ ರೂ.ನಿಂದ ಗರಿಷ್ಠ 7.50 ಲಕ್ಷ ರೂ.ಒಳಗಿರಬೇಕು.
ಗಂಗಾ ಕಲ್ಯಾಣ ನೀರಾವರಿ ಯೋಜನೆ:
ಈ ಯೋಜನೆಯ 1 ಎಕರೆ ಯಿಂದ 5 ಎಕರೆವರೆಗಿನ ಖುಷ್ಕಿ ಜಮೀನು ಹೊಂದಿರುವ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಉಚಿತವಾಗಿ 2 ಲಕ್ಷ ರೂ. ವೆಚ್ಚದಲ್ಲಿ ನಿಗಮದ ವತಿಯಿಂದ ಕೊಳವೆ ಬಾವಿ ಕೊರೆಸಿಕೊಡಲಾಗುವುದು.
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ ಮೇಲ್ಪಟ್ಟು 45, ಹಾಗೂ 55 ವರ್ಷದೊಳಗೆ ವಯೋಮಿತಿಯಿರಬೇಕು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಮತ್ತು ಆಧಾರ್ ಕಾರ್ಡ್ನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
ಈಗಾಗಲೇ ಸಾಲ ಮನ್ನಾ ಆಗಿರುವ ಫಲಾನುಭವಿಗಳಿಗೆ ಹೊಸದಾಗಿ ಸಾಲ ನೀಡಲಾಗುವುದಿಲ್ಲ. ಫಲಾನುಭವಿಯು ರಾಜ್ಯದ ಮತೀಯ ಅಲ್ಪಸಂಖ್ಯಾತರಾಗಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 81 ಸಾವಿರ ರೂ. ಮತ್ತು ನಗರ ಪ್ರದೇಶದವರಿಗೆ 1.03 ಲಕ್ಷ ರೂ.ಒಳಗಿರಬೇಕು.
ಈ ಎರಡು ಯೋಜನೆಗಳನ್ನು ಆಫ್ಲೈನ್ನಲ್ಲಿ ಭರ್ತಿ ಮಾಡಿ ಅರ್ಜಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸಲು ಮಾರ್ಚ್ 16 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ದೂ.ಸಂ.08272-220449, 8971282932 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.