ಭಾರತ ಸರ್ಕಾರದ ಎಂ.ಎಸ್.ಎಂ.ಇ. ಯೋಜನೆಯಡಿ 2022-23ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ವಿದ್ಯಾವಂತ ಯುವಕ/ಯುವತಿಯರಿಗೆ/ಕಸಬುದಾರರಿಗೆ ಅತೀ ಸಣ್ಣ ಕೈಗಾರಿಕಾ ಘಟಕಗಳನ್ನು ಹಾಗೂ ಸೇವಾ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಸಲುವಾಗಿ ಈ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಈ ಯೋಜನೆಯಡಿ ನಿರಂತರವಾಗಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ವಿಳಾಸ: www.kvic.gov.in / pmegp online application registration. ವಿರುತ್ತದೆ. ಅಭ್ಯರ್ಥಿಗಳು ಈ ಕೆಳಕಂಡ ಷರತ್ತುಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸ್ವಯಂ ಉದ್ಯೋಗವನ್ನು ಪ್ರಾರಂಭ ಮಾಡಿ ಉದ್ಯೋಗ ಕಲ್ಪಿಸುವುದು ಮುಖ್ಯ ಉದ್ದೇಶವಾಗಿರುತ್ತದೆ.
ಕೈಗಾರಿಕೆಗಳನ್ನು ಪ್ರಾರಂಭಮಾಡುವAತಹ ಭಾವಿ ಉದ್ದಿಮೆದಾರರಿಗೆ ಸಾಮಾನ್ಯ ವರ್ಗದವರಿಗೆ ನಗರ ಪ್ರದೇಶದಲ್ಲಿ ಶೇ:15 ರಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ:25% ರಂತೆ ಸಹಾಯಧನದ ಸೌಲಭ್ಯವಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರರು/ ಮಾಜಿ ಸೈನಿಕರು/ ಅಂಗವಿಕಲರು ಹಾಗೂ ಮಹಿಳಾ ಉದ್ದಿಮೆದಾರರಿಗೆ ನಗರ ಪ್ರದೇಶದವರಿಗೆ ಶೇ:25 ರಂತೆ ಹಾಗೂ ಗ್ರಾಮೀಣ ಪ್ರದೇಶದವರಿಗೆ ಶೇ:35 ರಂತೆ ಸಹಾಯಧನವನ್ನು ಕಲ್ಪಿಸಲಾಗುತ್ತದೆ.
ಈ ಯೋಜನೆಯಡಿ ಸಂಯುಕ್ತವಾಗಿ ಯಂತ್ರೋಪಕರಣಗಳ ಖರೀದಿಗಾಗಿ ಹಾಗೂ ದುಡಿಮೆ ಬಂಡವಾಳದ ಸಲುವಾಗಿ ಸಾಲ ಸೌಲಭ್ಯವನ್ನು ಬ್ಯಾಂಕ್ ಮುಖಾಂತರ ಕಲ್ಪಿಸಲಾಗುತ್ತದೆ. ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆನ್‌ಲೈನ್ ಮುಖಾಂತರ ಸರ್ವಿಸ್ ಏರಿಯಾ ಪ್ರಕಾರ ಆಯಾ ಬ್ಯಾಂಕುಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶಿಫಾರಸ್ಸು ಮಾಡಲಾಗುತ್ತದೆ. ಬ್ಯಾಂಕಿನಿಂದ ಸಾಲ ಮಂಜೂರಾತಿ ಪತ್ರ ನೀಡಿದ ಬಳಿಕೆ ಅಭ್ಯರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಮೊದಲು ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಪಡೆದಿದ್ದಲ್ಲಿ ಅವರಿಗೆ ವಿನಾಯಿತಿ ನೀಡಲಾಗುತ್ತದೆ.
ಕನಿಷ್ಠ 18 ವರ್ಷ ಮೇಲ್ಪಟ್ಟವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. ಯಾವುದೇ ಆದಾಯ ಮಿತಿ ಇರುವುದಿಲ್ಲ.
ದಾಖಲಾತಿಗಳು:
ಜಾತಿ ಪ್ರಮಾಣ ಪತ್ರ. ಗ್ರಾಮೀಣ ಪ್ರಮಾಣ ಪತ್ರ. ಯೋಜನಾ ವರದಿ. ಉದ್ಯಮಶೀಲತಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ (ತರಬೇತಿ ಪಡೆದಿದ್ದಲ್ಲಿ). ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಗ್ರಾಮೀಣ ಪ್ರದೇಶ ಅಭ್ಯರ್ಥಿಗಳು ಇದ್ದಲ್ಲಿ ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ಸಿಬಿಲ್ ರಿಪೋರ್ಟ್ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9901176797, 8861241093 ಅಥವಾ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ರಾಯಚೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.