alex Certify LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮಿಸ್ಡ್ ಕಾಲ್ ಕೊಟ್ರೆ ಮನೆಗೆ ಬರುತ್ತೆ ಗ್ಯಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮಿಸ್ಡ್ ಕಾಲ್ ಕೊಟ್ರೆ ಮನೆಗೆ ಬರುತ್ತೆ ಗ್ಯಾಸ್

ನವದೆಹಲಿ: ಅಡುಗೆ ಅನಿಲ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಸಂಪರ್ಕ ಪಡೆಯಲು ಗ್ರಾಹಕರು ಡೀಲರ್ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಇನ್ನು ಮುಂದೆ 845 4955 555 ಸಂಖ್ಯೆಗೆ ಮಿಸ್ಡ್ ಕಾಲ್ ಕೊಟ್ಟರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಬ್ಬಂದಿ ನಿಮ್ಮ ಮನೆಯ ಬಾಗಿಲಿಗೆ ಬಂದು ಹೊಸ ಅಡುಗೆ ಅನಿಲ ಸಂಪರ್ಕ ನೀಡಲಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧ್ಯಕ್ಷ ಎಸ್.ಎಂ. ವೈದ್ಯ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ದೇಶದ ಯಾವುದೇ ಮೂಲೆಯಲ್ಲಿರುವ ಗ್ರಾಹಕರು ಎಲ್ಪಿಜಿ ಹೊಸ ಸಂಪರ್ಕ ಪಡೆಯಲು ಮಿಸ್ಡ್ ಕಾಲ್ ಕೊಟ್ಟರೆ ಸಾಕು. ಹಿರಿಯ ನಾಗರಿಕರು ಮತ್ತು ಗ್ರಾಮೀಣ ಪ್ರದೇಶದ ಜನರು ಇರುವಲ್ಲಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುತ್ತದೆ

ಇದರೊಂದಿಗೆ 5 ಕೆಜಿ ಸಿಲಿಂಡರ್ ಕೂಡ ಪಡೆಯಬಹುದಾಗಿದೆ. ಹಾಲಿ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರು ಎಲ್ಪಿಜಿ ಸಿಲಿಂಡರ್ ರೀಫಿಲ್ ಮಾಡಿಸಿಕೊಳ್ಳಲು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ಡ್ ಕಾಲ್ ಕೊಟ್ಟರೆ ಸಿಬ್ಬಂದಿ ಮನೆಗೆ ಸಿಲಿಂಡರ್ ತಲುಪಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...