ಎಲ್ಲಾ ಗ್ರಾಹಕರು 2022ರ ಜುಲೈ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ, ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ರಾಯಚೂರು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ಗ್ಯಾಸ್ ಏಜೆನ್ಸಿಗಳು ಗೃಹ ಬಳಿಕೆಯ ಅನಿಲ ಸಿಲಿಂಡರ್ ಅನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08532-236178 ಮತ್ತು ತಹಶೀಲ್ದಾರ ಕಚೇರಿಯ ಆಹಾರ ಶಾಖೆಗೆ ದೂರು ಸಲಿಸುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.