alex Certify LPG ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LPG ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ.

ಗೃಹ ಬಳಿಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡುವುದು ಗ್ಯಾಸ್ ಏಜೆನ್ಸಿಗಳ ಜವಾಬ್ದಾರಿ. ಆದ್ದರಿಂದ ಯಾವುದೇ ಕಾರಣಕ್ಕೂ ಅನಿಲ ಸಿಲಿಂಡರ್ ಗಳನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕರ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡುವಂತಿಲ್ಲ,

ಸಿಲಿಂಡರರ್ ಅನ್ನು ಮನೆಗಳಲ್ಲಿ ಅಥವಾ ಎಷ್ಟೇ ಮಹಡಿ ಇದ್ದರೂ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಸಾರ್ವಜನಿಕರಲ್ಲಿ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದ್ದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ: 08532-231678 ಅಥವಾ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...