ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಳ ಮಾಡಲಾಗಿದೆ.
ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು ಸಬ್ಸಿಡಿರಹಿತ 14.2 ಕೆಜಿ ಸಿಲಿಂಡರ್ ದರ 772 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಡಿಸೆಂಬರ್ ನಿಂದ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 3 ಸಲ ಹೆಚ್ಚಳ ಮಾಡಲಾಗಿದೆ. ಸಬ್ಸಿಡಿಯನ್ನೂ ಕೂಡ ನಿಲ್ಲಿಸಲಾಗಿದೆ.