ನವದೆಹಲಿ: ಭಾರೀ ಏರಿಕೆಯ ನಂತರ ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಸಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ.
ಅದೇ ರೀತಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು 10 ರೂ.ನಷ್ಟು ಕಡಿಮೆ ಮಾಡಲಾಗಿದೆ. ಪರಿಷ್ಕೃತ ದರಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕೊರೋನಾ ಎರಡನೇ ಅಲೆ ಕಾರಣ ಬೇಡಿಕೆ ಕಡಿಮೆಯಾಗಿರುವುದು, ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಬೆಲೆ ಇಳಿಕೆ ಮಾಡಲಾಗಿದೆ ಎನ್ನಲಾಗಿದೆ.
ಏಪ್ರಿಲ್ 1, 2021 ರಿಂದ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 10 ರೂ.ಗಳಷ್ಟು ಕಡಿಮೆ ಮಾಡಲಾಗಿದೆ ಎಂದು ಹೇಳಲಾಗಿದೆ.