ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ ಏರಿಕೆಯಾಗಿದೆ.
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 350.50 ರೂ. ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 2119.50 ರೂ. ಗೆ ತಲುಪಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ.