alex Certify BIG BREAKING: LPG ಗ್ರಾಹಕರಿಗೆ ಮತ್ತೆ ಬಿಗ್ ಶಾಕ್, ಗ್ಯಾಸ್ ಸಿಲಿಂಡರ್ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: LPG ಗ್ರಾಹಕರಿಗೆ ಮತ್ತೆ ಬಿಗ್ ಶಾಕ್, ಗ್ಯಾಸ್ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ 899.50 ರೂ. ಆಗಿದೆ. 5 ಕೆಜಿ ಸಿಲಿಂಡರ್‌ನ ಹೊಸ ದರ ಈಗ 502 ರೂ. ಆಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...