ನವದೆಹಲಿ: ತೈಲಬೆಲೆ ಮಾದರಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವಂತೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ವಾರಕ್ಕೊಮ್ಮೆ ಪರಿಷ್ಕರಿಸಲಾಗುವುದು.
2021 ರಿಂದ ನಿಯಮ ಜಾರಿಗೆ ಬರಲಿದೆ. ಸದ್ಯ ಪ್ರತಿ ತಿಂಗಳಿಗೊಮ್ಮೆ ಸಿಲಿಂಡರ್ ದರ ಪರಿಷ್ಕರಣೆಯಾಗುತ್ತಿದ್ದು, ಇನ್ನು ಮುಂದೆ ವಾರಕ್ಕೊಮ್ಮೆ ಬೆಲೆ ಪರಿಷ್ಕರಣೆ ಮಾಡಲು ತೈಲ ಕಂಪನಿಗಳು ಮುಂದಾಗಿವೆ. ಕಳೆದ 9 ತಿಂಗಳಿನಿಂದ ಸಬ್ಸಿಡಿ ಇಲ್ಲವಾಗಿದೆ. ಸಬ್ಸಿಡಿಗಾಗಿ ಗ್ರಾಹಕರು ಕಾಯುತ್ತಿದ್ದಾರೆ. ಡಿಸೆಂಬರ್ ಒಂದೇ ತಿಂಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ 100 ರೂಪಾಯಿ ಹೆಚ್ಚಾಗಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಸಿಲಿಂಡರ್ ದರ 250 ರೂ. ಹೆಚ್ಚಳವಾಗಿದೆ.